CrimeNational

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ; ಎಂಟು ಮಂದಿ ದುರ್ಮರಣ

ಆಂಧ್ರ ಪ್ರದೇಶ; ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.  ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಚಿಂತೂರು ಬಳಿಯ ಬಿಡ್ಡಗುಡೆಂ ಬಳಿ ಈ ದುರಂತ ಸಂಭವಿಸಿದೆ.

 

ಟ್ರಕ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ.  ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಭದ್ರಾಚಲಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡೂ ವಾಹನಗಳ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

 

Share Post