CrimeNational

ಮೂಸೆವಾಲಾ ಹತ್ಯೆ ಕೇಸ್‌ ಆರೋಪಿಗಳ ಮೇಲೆ ಫೈರಿಂಗ್‌; ಗುಂಡಿನ ಚಕಮಕಿ

ಅಮೃತಸರ; ಗಾಯಕ ಸಿಧು ಮೂಸೇವಾಲಾ ಹತ್ಯೆ ಕೇಸ್‌ನ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪಂಜಾಬ್‌ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಈ ಎನ್‌ಕೌಂಟರ್‌ ನಡೆಯುತ್ತಿದೆ.

ಆರೋಪಿ ಗ್ಯಾಂಗ್‌ಸ್ಟರ್‌ಗಳನ್ನು ಹಿಡಿಯಲು ಹೋದಾಗ ಅವರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡಾ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಪೊಲೀಸ್ ಹಾಗೂ ಗ್ಯಾಂಗಸ್ಟರ್‌ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ. ಪಂಜಾಬ್‌ನ ಆ್ಯಂಟಿ ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಇಬ್ಬರು ಆರೋಪಿಗಳ ಹುಡುಕಾಟದ ನಡುವೆ ಎನ್‌ಕೌಂಟರ್ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮನೆಗಳಲ್ಲೇ ಉಳಿದುಕೊಳ್ಳುವಂತೆ ಸೂಚನೆ ನೀಡಲಾಗಿದೆ.,

ಮೇ 19ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

Share Post