ಮೂರು ತಿಂಗಳಲ್ಲಿ 100 ಕೋಟಿ ರೂ. ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
ಮುಂಬೈ; ಕಳೆದ 3 ತಿಂಗಳಲ್ಲಿ ದೇಶಾದ್ಯಂತ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ದಾಳಿಗಳಲ್ಲಿ ಒಟ್ಟು 100 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ವಂಚನೆ ಮಾಡುತ್ತಿದ್ದ ಕೋಲ್ಕತ್ತಾದ ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಬರೋಬ್ಬರಿ 17 ಕೋಟಿ ರೂಪಾಯಿ ವಶಪಡಿಕೊಂಡಿತ್ತು. ಈ ಮೊದಲು ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 50 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಶಪಡಿಸಿಕೊಂಡಿತ್ತು.
ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇ.ಡಿ ದಾಳಿ ನಡೆಸಿದ ವೇಳೆ ಹಣ ಎಣಿಕೆಗಾಗಿ 24 ಗಂಟೆಗಳನ್ನು ಇ.ಡಿ ಅಧಿಕಾರಿಗಳು ತೆಗೆದುಕೊಂಡಿದ್ದರು.