CrimeDistricts

ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಭಾರಿ ಶಬ್ದಕ್ಕೆ ಬೆಚ್ಚಿದ ಜನ

ಉಡುಪಿ; ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಭಾರಿ ಶಬ್ದ ಕೇಳಿ ಜನರು ಬೆಚ್ಚಿಬಿದ್ದಿದ್ದಾರೆ.. ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಹಿಮ್ಮುಂಜೆಯ ಕಾಜೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.. ಇಬ್ಬರು ಗಾಯಾಳು ಮಹಿಳೆಯರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ..

ಕಳೆದ ಕೆಲವು ವರ್ಷಗಳಿಂದ ಇಲ್ಲಿನ ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರಿಕೆ ಮಾಡಲಾಗುತ್ತಿತ್ತು.. ಇದರಲ್ಲಿ ಒಂದು ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.. ಇದ್ದಕ್ಕಿದ್ದಂತೆ ಸಿಡಿಮದ್ದು ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ನಡೆದಿದೆ.. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದೆ..

 

Share Post