CrimeNational

ಶಾಲಾ ವ್ಯಾನ್‌-ಬಸ್‌ ನಡುವೆ ಭೀಕರ ಅಪಘಾತ; 6 ವಿದ್ಯಾರ್ಥಿಗಳ ದುರ್ಮರಣ

ಲಕ್ನೋ; ಉತ್ತರ ಪ್ರದೇಶದ ಬುಡೌನ್‍ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಆರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. 16 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲಾ ವ್ಯಾನ್‌ ಹಾಗೂ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಆರು ವಿದ್ಯಾರ್ಥಿಗಳ ಜೊತೆ ಶಾಲಾ ವ್ಯಾನ್‌ನ ಚಾಲಕ ಕೂಡಾ ಮೃತಪಟ್ಟಿದ್ದಾನೆ. ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post