CrimeDistricts

ಟಿಪ್ಪರ್‌-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಸಜೀವದಹನ!

ಬೆಳಗಾವಿ; ಬೆಳಗಾವಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಈ ವೇಳೆ ಕಾರು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರಂತ ನಡೆದಿದೆ. 

ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ ಕಾರಿನ ಡೀಸೆಲ್‌ ಟ್ಯಾಂಕ್‌ ಒಡೆದು ಬೆಂಕಿ ಹೊತ್ತಿಕೊಂಡಿದೆ. ಮಾರುತಿ ಬೆಳ್ಗಾಂವಕರ್(24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಸಜೀವ ದಹನವಾದ ದುರ್ದೈವಿಗಳಾಗಿದ್ದಾರೆ.

ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಎನ್ನುವವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿಪ್ಪರ್‌ ಚಾಲಕ ಪೊಲೀಸರಿಗೆ ಶರಣಾಗಿದ್ದಾನೆ.

Share Post