CrimeNational

ಒಡಿಶಾದಲ್ಲಿ ಭೀಕರ ಅಪಘಾತ; 12 ಮಂದಿ ದಾರುಣ ಸಾವು..!

ಭುವನೇಶ್ವರ; ಕೆಲ ದಿನಗಳ ಹಿಂದಷ್ಟೇ ಒಡಿಶಾದಲ್ಲಿ ಭೀಕರ ರೈಲು ದುರಂತ ಸಂಭವಿಸಿತ್ತು. ಇದೀಗ ಭೀಕರ ರಸ್ತೆ ಅಪಘಾತ ನಡೆದಿದೆ. ಎರಡು ಬಸ್‌ಗಳ ನಡುವೆ ಡಿಕ್ಕಿಯಾಗಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

ಒಡಿಶಾದ ಗಂಜಾಂ ಜಿಲ್ಲೆಯ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಈ ದುರಂತ ನಡೆದಿದೆ. ಬರ್ಹಾಂಪುರದಲ್ಲಿ ವಿವಾಹಮಹೋತ್ಸವ ಮುಗಿಸಿಕೊಂಡು ಪ್ರಯಾಣಿಕರು ದಿಗಪಹಂಡಿ ಬಳಿಕ ಖಂಡದೇಲಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಒಂದೇ ಕುಟುಂಬದ ಏಳು ಮಂದಿ ಸೇರಿದ್ದಾರೆ. ಏಳು ಮಂದಿ ಗಾಯಗೊಂಡಿದ್ದು, ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Share Post