CrimeDistricts

ಚಿತ್ರದುರ್ಗ ಬಳಿ ನಡೆಯಿತು ಭೀಕರ ಅಪಘಾತ; ಐದು ಮಂದಿ ದುರ್ಮರಣ

ಚಿತ್ರದುರ್ಗ; ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ಹಿರಿಯೂರಿನ ಗೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಮತ್ತೊಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ಪಾರ್ವತಮ್ಮ (45) ಮಸ್ಕಿ ಮೂಲದ ರಮೇಶ್ (40) ಹಾಗೂ ಮಾಬಮ್ಮ (35) ಮೃತಪಟ್ಟು ದುರ್ದೈವಿಗಳು. ಉಳಿದವರ ಮಾಹಿತಿ ಗೊತ್ತಾಗಿಲ್ಲ. ಇನ್ನೂ ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಬಸ್‌ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ. ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.

Share Post