CrimeNational

ರಾಯ್‌ಪುರದ ಬಳಿ ಭೀಕರ ಅಪಘಾತ; 11 ಮಂದಿ ದುರ್ಮರಣ

ರಾಯ್‌ಪುರ; ರಾಯ್‌ಪುರದ ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್‌ ಹಾಗೂ ವ್ಯಾನ್‌ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ.

ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲರೂ ಸಂಬಂಧಿಕರಾಗಿದ್ದಾರೆ. ಕಾರ್ಯಕ್ರಮವೊಂದನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Share Post