CrimeNational

ವಾರಾಣಸಿ ಬಳಿ ಭೀಕರ ಅಪಘಾತ; ಎಂಟು ಮಂದಿ ದಾರುಣ ಸಾವು

ವಾರಾಣಸಿ; ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಟ್ರಕ್‌ ಹಾಗೂ ಕಾರಿನ ನಡುವೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಎಂಟು ಮಂದಿ ದಾರುಣ ಸಾವನ್ನಪ್ಪಿದ್ದಾರೆ.

ಇಂದು ಬೆಳಗಿನಜಾವ 4 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಕಾರು ಲಖನೌನಿಂದ ಫಿಲಿಬಿತ್‌ ಕಡೆಗೆ ಹೋಗುತ್ತಿತ್ತು. ವಾರಾಣಸಿ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೂರು ವರ್ಷದ ಮಗು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದೆ. ಆದ್ರೆ ಮಗುವಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

Share Post