Crime

ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ ತಂದೆ ಅರೆಸ್ಟ್

ಜೈಪುರ : ರಾಜಸ್ಥಾನದಲ್ಲಿ ವ್ಯಕ್ತಿ ಒಬ್ಬ ತನ್ನ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬರಾನ್ ಜಿಲ್ಲೆಯಲ್ಲಿ ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆಗಾಗಿ 8 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ. ಈಗ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಘಟನೆ ಛಿಪಬರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಡಿಸೆಂಬರ್ 22 ರಂದು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಂದೆ ಹಣ ಪಡೆದು ತನಗೆ ಮತ್ತು ತನ್ನ ತಂಗಿಗೆ ಮದುವೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ನವಂಬರ್‌ ೧೩ರಂದು ಬದ್ರಿಲಾಲ್‌ ಮತ್ತು ಸುರೇಶ್‌ ಮಾರುತಿ ವ್ಯಾನ್‌ನಲ್ಲಿ ಬಂದು ಈ ಹೆಣ್ಣು ಮಕ್ಕಳನ್ನು ಕರೆದೊಯ್ದಿದ್ದರು. ಬದ್ರಿ ಮೀನಾ ಎಂಬ ಬಾಲಕಿಗೆ ದೈಹಿಕವಾಗಿ ಹಿಂಸೆ ನೀಡಿದ್ದಾನೆ ಮತ್ತು ಅವರ ತಂಗಿಯನ್ನು ಕೋಣೆಯಲ್ಲಿ ಕೂಡಿಹಾಕಿ ಹಿಂಸೆ ಕೊಟ್ಟಿದ್ದಾರೆ ಎಂದು ಬಾಲಕಿಯರ ದೂರಿನಲ್ಲಿ ಉಲ್ಲೇಖವಾಗಿದೆ. ಸದ್ಯ ಪೊಲೀಸರು ಬಾಲಕಿಯರ ತಂದೆಯನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ.

Share Post