ಸಿಎಂ ಸಿದ್ದರಾಮಯ್ಯಗೆ ಎಫ್‌ಐಆರ್ ಭೀತಿ!; ವಿಶೇಷ ಕೋರ್ಟ್‌ನಲ್ಲಿಂದು ವಿಚಾರಣೆ!
ಬೆಂಗಳೂರು; ಮುಡಾ ಕೇಸ್‌ನಲ್ಲಿ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಮನವಿಯನ್ನು ಪುರಸ್ಕರಿಸಿಲ್ಲ.. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.. ಈ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರುಗಳ ವಿಚಾರಣೆ ನಡೆಯಲಿದೆ.. ಈ ಕೋರ್ಟ್‌ನಲ್ಲಿ ರಾಜ್ಯಪಾಲರ ಅನುಮತಿಯಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದರೆ, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಲಿದೆ.. ಹೀಗಾಗಿ ಸಿದ್ದರಾಮಯ್ಯ ಅವರು ಎಫ್‌ಐಆರ್ ಭೀತಿ ಎದುರಿಸುತ್ತಿದ್ದಾರೆ..
ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ 14 ಬದಲಿ ನಿವೇಶನ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇದೆ ಎಂದು ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ಹಾಗೂ ಪ್ರದೀಪ್ ಎಂಬುವವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಖಾಸಗಿ ದೂರುಗಳನ್ನು ಸಲ್ಲಿಸಿದ್ದರು.. ಇದರ ಜೊತೆ ಇವರ ಮನವಿ ಮೇರೆಗೆ ರಾಜ್ಯಪಾಲರು ಕೂಡಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರು.. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದರು.. ಆದ್ರೆ ಹೈಕೋರ್ಟ್, ಸಿದ್ದರಾಮಯ್ಯ ಮನವಿಯನ್ನು ತಳ್ಳಿ ಹಾಕಿದೆ.. ಹೀಗಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಖಾಸಗಿ ದೂರುಗಳ ವಿಚಾರಣೆ ನಡೆಯಲಿದೆ.. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪರಿಗಣಿಸಿ ಕೋರ್ಟ್ ಸಿದ್ದರಾಮಯ್ಯ ವಿಚಾರಣೆಗೆ ಅನುಮತಿ ನೀಡಿದರೆ ಅವರಿಗೆ ಕಾನೂನು ಸಂಕಷ್ಟ ಎದುರಾಗಲಿದೆ..
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಇಂದು ಈ ಬಗ್ಗೆ ಆದೇಶ ನೀಡುವ ಸಾಧ್ಯತೆ ಇದೆ.. ಯಾವ ಸಂಸ್ಥೆ ತನಿಖೆ ನಡೆಸಬೇಕೆಂದು ಕೋರ್ಟ್ ನಿರ್ಧಾರ ಮಾಡಲಿದ್ದು, ತನಿಖೆಗೆ ಆದೇಶ ನೀಡಿದರೆ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಬೇಕಾಗುತ್ತದೆ.. ಆಗ ಸಿಎಂ ರಾಜೀನಾಮೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ..
ಹೀಗಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ಸಿದ್ದರಾಮಯ್ಯ ಪರ ವಕೀಲರು ಮೇಲ್ಮನವಿ ಸಲ್ಲಿಸಿ, ನಿನ್ನೆಯ ಕೋರ್ಟ್ ಆದೇಶಕ್ಕೆ ತಡೆ ಕೋರಲಿದ್ದಾರೆ.. ಕೋರ್ಟ್ ಈ ಅರ್ಜಿನಲ್ಲಿ ಪರಿಗಣಿಸಿ, ತಾತ್ಕಾಲಿಕವಾಗಿ ಆದೇಶಕ್ಕೆ ತಡೆ ನೀಡಿದರೆ ಸಿದ್ದರಾಮಯ್ಯಗೆ ರಿಲೀಫ್ ಸಿಗಲಿದೆ.. ಒಂದು ವೇಳೆ ನಿನ್ನೆ ಆದೇಶವನ್ನೇ ಎತ್ತಿ ಹಿಡಿದರೆ, ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೊರೆಹೋಗಬೇಕಾಗುತ್ತದೆ..