CrimeNational

ಕೆಮಿಕಲ್‌ ಫ್ಯಾಕ್ಟರಿ ಧಗಧಗ: ಅಗ್ನಿಶಾಮಕ ಸಿಬ್ಬಂದಿ ದೌಡು

ಮಹಾರಾಷ್ಟ್ರ: ಮಹಾರಾಷ್ಟ್ರದ ಕೊಲ್ಲಾಪುರದ ಇಚಲಕರಂಜಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.  ಟೆಕ್ಸ್‌ಟೈಲ್ ಪಾರ್ಕ್‌ನಲ್ಲಿರುವ  ಕಂಪನಿಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಪೋಟದ ಬಳಿಕ ಬೆಂಕಿ ಕಾಣಿಸಿಕೊಂಡು ಮುಗಿಲೆತ್ತರಕ್ಕೆ ಚಿಮ್ಮಿದೆ.

ಜ್ವಾಲೆ ಬಹಳ ವೇಗವಾಗಿ ಫ್ಯಾಕ್ಟರಿ ಪೂರ್ತಿ ಹರಡಿದೆ. ಬೆಂಕಿಯ ಕೆನ್ನಾಲಿಗೆ  ಕೋಟ್ಯಂತರ ಮೌಲ್ಯದ ಆಸ್ತಿ ನಾಶವಾಗಿದೆ ಎನ್ನಲಾಗಿದೆ. ಸದ್ಯಕ್ಕೆ ಯಾವುದೇ ಗಾಯ ಅಥವಾ ಪ್ರಾಣಹಾನಿಯಾಗಿರುವ ಬಗ್ಗೆ ಇದುವರೆಗೂ ಯಾವುದೇ ಮಾಹಿತಿಯಿಲ್ಲ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ. ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿವೆ.

Share Post