Crime

ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಶಿವಪಾರ್ವತಿ ಚಿತ್ರಮಂದಿರ

ಹೈದರಾಬಾದ್‌: ಇಲ್ಲಿನ ಕೂಕಟಪಲ್ಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ಇಂದು ಬೆಳಗಿನಜಾವ ಕೆಪಿಹೆಚ್‌ಬಿ ಕಾಲೋನಿಯಲ್ಲಿನ ಶಿವಪಾರ್ವತಿ ಚಿತ್ರಮಂದಿರದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಇಡೀ ಚಿತ್ರಮಂದಿರ ಸುಟ್ಟು ಕರಕಲಾಗಿದೆ.

ಚಿತ್ರಮಂದಿರದಲ್ಲಿದ್ದ ಪೀಠೋಪಕರಣಗಳು, ಸಿನಿಮಾ ಸ್ಕ್ರೀನ್‌ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿವೆ. ಅರ್ಧರಾತ್ರಿಯ ನಂತರ ಈ ಬೆಂಕಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.  ಚಿತ್ರಮಂದಿರಕ್ಕೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮೂರು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿಯನ್ನು ನಂದಿಸಲಾಗಿತು.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಬೆಂಕಿ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಚಿತ್ರಮಂದಿರದಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Share Post