CrimeNational

ರೈಲ್ವೆ ನಿಲ್ದಾಣದ ಬಳಿ ಬೆಂಕಿ ದುರಂತ; 6 ಮಂದಿ ಸಜೀವದಹನ!

ಪಾಟ್ನಾ; ಬಿಹಾರದ ಪಾಟ್ನಾದಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದೆ.. ಪಾಟ್ನಾದ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡಕ್ಕೆ ಆವರಿಸಿದೆ.. ಇದರಿಂದಾಗಿ 6 ಮಂದಿ ಸಜೀವ ದಹನವಾಗಿದ್ದಾರೆ.. 

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.. ಹೋಟೆಲ್‌ ಒಳಗಿದ್ದವರು ಆದಷ್ಟು ಬೇಗ ಹೊರತರಲಾಯಿತು.. ಇದರಿಂದಾಗಿ ಆಗಬೇಕಿದ್ದ ಭಾರಿ ಅನಾಹುತ ತಪ್ಪಿಸಿದಂತಾಗಿದೆ.. ಆದ್ರೆ ಇದರ ನಡುವೆ ಆರು ಮಂದಿ ಜೀವಂತವಾಗಿ ದಹನವಾಗಿದ್ದಾರೆ.. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ..

ಹೋಟೆಲ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ಜನರಿದ್ದರು.. ಇದರಲ್ಲಿ 40 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.. ಇನ್ನು ಆರು ಮಂದಿ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ..

ಹೋಟೆಲ್‌ನಲ್ಲಿ ಅಡುಗೆ ಮಾಡಲು ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ.. ಆದ್ರೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಹೋಟೆಲ್‌ನಲ್ಲಿ ಸರಿಯಾದ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಲಾಗುತ್ತಿದೆ..

Share Post