BengaluruCrime

ಬೆಂಗಳೂರಿನ ಕೋಣನಕುಂಟೆ ಬಳಿ ಭಾರಿ ಬೆಂಕಿ ದುರಂತ..!

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಭಾರಿ ಅಗ್ನಿ ದುರಂತ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಕೋಣನಕುಂಟೆ ಕ್ರಾಸ್‌ ಬಳಿಯ ಕನಕಪುರ ರಸ್ತೆಯಲ್ಲಿ ಈ ದುರಂತ ನಡೆದಿದೆ. ಇಲ್ಲಿನ 143ನೇ ಇಲ್ಲರ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದೆತ್ತರಕ್ಕೆ ಹೊಗೆ ಆವರಿಸಿತ್ತು.

   ದೊಡ್ಡ ಮಟ್ಟದಲ್ಲಿ ಬೆಂಕಿ ಹೊತ್ತುಕೊಂಡಿದ್ದರಿಂದಾಗಿ ಸುತ್ತಮುತ್ತಲ ಜನರಲ್ಲಿ ಭೀತಿ ಆವರಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸಿದರು.  ಯಾವ ಕಾರಣಕ್ಕೆ ಬೆಂಕಿ ಆಕಸ್ಮಿಕ ಸಂಭವಿಸಿತು ಎಂಬುದರ ಬಗ್ಗೆ ಮಾತಿ ಇಲ್ಲ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Share Post