CinemaCrime

ಸಲ್ಮಾನ್ ಖಾನ್ ನಿವಾಸದ ಬಳಿ ಗುಂಡಿನ ದಾಳಿ; ಇದು ಆತನ ಕೆಲಸವೇನಾ..?

ಮುಂಬೈ; ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆ ಮುಂದೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾರೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ನಿವಾಸದ ಬಳಿ ಬಂದ ದುಷ್ಕರ್ಮಿಗಳು ನಾಲ್ಕು ಬಾರಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

  ಬಾಂದ್ರಾದಲ್ಲಿ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನಲ್ಲಿ ಸಲ್ಮಾನ್ ಖಾನ್ ವಾಸವಿದ್ದಾರೆ. ಇಲ್ಲಿ ಈ ಘಟನೆ ನಡೆದಿದೆ. ಸಲ್ಮಾನ್ ಖಾನ್ ಗೆ ಭಯ ಹುಟ್ಟಿಸಲು ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ವಂಡ್ರೆ ಠಾಣೆ ಪೊಲೀಸರು, ಅಪರಾಧ ತನಿಖಾ ದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿವೆ. ಘಟನೆ ನಂತರ ಸ್ಥಳದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

  ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಚಾನಲ್ ವೊಂದರ ಸಂದರ್ಶನದಲ್ಲಿ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಹೀಗಿರುವಾಗಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

 

Share Post