CrimeNational

ಮೊರಾದಾಬಾದ್‌ನಲ್ಲಿ ಬೆಂಕಿ ದುರಂತ; ಹೊತ್ತಿ ಉರಿದ ಬಹುಮಹಡಿ ಕಟ್ಟಡ

ಲಕ್ನೋ; ಉತ್ತರ ಪ್ರದೇಶದ ಮೊರಾದಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ದುರಂತ ನಡೆದಿದೆ. ಇಂದು ಬೆಳಗ್ಗೆ ನಡೆದ ಬೆಂಕಿ ದುರಂತದಲ್ಲಿ ಐವರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಭೀರವಾಗಿ ಸುಟ್ಟು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿಯನ್ನು ರಕ್ಷಿಸಲಾಗಿದೆ.  ಕಟ್ಟಡದಲ್ಲಿ ಒಂದೇ ಕುಟುಂಬದ ಸದಸ್ಯರು ವಾಸವಿದ್ದರು ಎಂಬುದು ಮಾಹಿತಿಯಿಂದ ತಿಳಿದುಬಂದಿದೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

 

Share Post