BengaluruCrime

ವಿದೇಶಿ ಮಹಿಳೆ ಬ್ಯಾಗ್‌ನಲ್ಲಿತ್ತು ಕಂತೆ ಕಂತೆ ಹಣ..!

ಬೆಂಗಳೂರು; ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮಹಿಳೆ ಬ್ಯಾಗ್‌ನಲ್ಲಿ ಕಂತೆ ಕಂತೆ ಭಾರತೀಯ ಕರೆನ್ಸಿ ಸಿಕ್ಕಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್‌ ಸ್ಕ್ಯಾನಿಂಗ್‌ ವೇಲೆ ಹಣ ಪತ್ತೆಯಾಗಿದ್ದು. ಮಹಿಳೆಯನ್ನು ವಿಮಾನ  ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಹಿಳೆಯ ಬ್ಯಾಗ್‌ನಲ್ಲಿ 15 ಲಕ್ಷ ರೂಪಾಯಿ ನಗದು ಸಿಕ್ಕಿದೆ. ಆದ್ರೆ ಈ ಹಣಕ್ಕೆ ಸೂಕ್ತ ದಾಖಲೆ ಒದಗಿಸಿಲ್ಲ. ಹೀಗಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಬಂತು, ಯಾರು ಕೊಟ್ಟರು, ಅದಕ್ಕೆ ದಾಖಲೆ ಎಲ್ಲವನ್ನೂ ವಿಚಾರಿಸುತ್ತಿದ್ದಾರೆ.

 

Share Post