CrimeDistricts

ರಾಯಚೂರಿನಲ್ಲಿ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ರಾಯಚೂರು; ರಾಯಚೂರಿನಲ್ಲಿ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ನಿನ್ನೆಯಿಂದ ನಾಲ್ವರು ವಿದ್ಯಾರ್ಥಿನಿಯರು ಕಾಣಿಸದಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ನಾಲ್ವರೂ ವಿದ್ಯಾರ್ಥಿನಿಯರು ರಾಯಚೂರು ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿಗಳು. ಮೂವರು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ, ಒಬ್ಬ ವಿದ್ಯಾರ್ಥಿನಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾರೆ. ನಾಲ್ವರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಎಲ್ಲಿಗೆ ಹೋಗಿದ್ದಾರೆ ಎಂಬುದು ಗೊತ್ತಾಗಿಲ್ಲ. ಹೀಗಾಗಿ ವಿದ್ಯಾರ್ಥಿನಿಯರ ಪೋಷಕರು ರಾಯಚೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share Post