CrimeNational

ತಡರಾತ್ರಿ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗಾಗಿ ಖಾಕಿ ಶೋಧ

ಮಧ್ಯಪ್ರದೇಶ: ಗಂಡನ ಎದುರೇ 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ನಡೆದಿದೆ. ಡಿಸೆಂಬರ್‌ 25ರ ರಾತ್ರಿ ದಂಪತಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಿಡಿಗೇಡಿಗಳು ದಂಪತಿ ಮೇಲೆ ಕಲ್ಲಿನಿಂದ ದಾಳಿ ಮಾಡಿದ್ದಾರೆ.

ದಾಳಿಗೊಳಗಾಗಿ ಬೈಕ್‌ ನಿಲ್ಲಿಸಿದ ಬಳಿಕ ಇಬ್ಬರ ಮೇಲೆ ಅಟ್ಯಾಕ್‌ ಮಾಡಿ ನೆಲಕ್ಕುರುಳಿಸಿದ್ದಾರೆ. ಕೂಡಲೇ ಆಕೆಯ ಪತಿಯಬನ್ನು ಮರಕ್ಕೆ ಕಟ್ಟಿ ಹಾಕಿ ಮನಸೂ ಇಚ್ಛೆ ಥಳಿಸಿ ಮೊಬೈಲ್‌, ಪರ್ಸ್‌, ಅವರ ಬಳಿಯಿದ್ದ ಒಡವೆಗಳನ್ನು ಕಿತ್ತುಕೊಂಡಿದ್ದಾರೆ. ಬಳಿಕ ಮಹಿಳೆಯ ವಸ್ತ್ರ ಕಳಚಿ ಅತೀ ಕ್ರೂರವಾಗಿ ನಡೆದುಕೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ದಂಪತಿಯ ಕಿರುಚಾಟವನ್ನು ಕೇಳಿ ಯಾರೋ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಯ ಮರ್ಮಾಂಗದಲ್ಲಿ ಗಂಭೀರ ಗಾಯಗಳಾಗಿರುವುದಾಗಿ ವೈದ್ಯರು ತಿಳಿಸಿದ್ರು ಸದ್ಯ ಮಹಿಳೆಗೆ ಚಿಕಿತ್ಸೆ ನಡೆಯುತ್ತಿದೆ. ಎರಡು ದಿನಗಳಿಂದ ಶೋಧ ಕಾರ್ಯ ನಡೆಯುತ್ತಿದ್ರೂ ಆರೋಪಿಗಳು ಪತ್ತೆಯಾಗಿಲ್ಲ. ನೆರೆಯ ಜಿಲ್ಲೆಗಳಲ್ಲೂ ಆರೋಪಿಗಳಿಗಾಗತ ಪೊಲೀಸರು ಬಲೆ ಬೀಸಿದ್ದಾರೆ.

Share Post