ಗಾರ್ಮೆಂಟ್ಸ್ ಬಸ್ ಅಪಘಾತ: ತಪ್ಪಿದ ಭಾರಿ ಅನಾಹುತ.
ತುಮಕೂರು: ಗಾರ್ಮೆಂಟ್ಸ್ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.
ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಬೈಪಾಸ್ ಬಳಿ ಘಟನೆ ಸಂಭವಿಸಿದೆ. ಬಸ್ ನಲ್ಲಿದ್ದ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಾಳಾಗಿದೆ, ಬಸ್ ನಲ್ಲಿ ಸುಮಾರು 50 ಕ್ಕೂ ಹೆಚ್ಚು ಮಹಿಳೆಯರು ಪ್ರಯಾಣಿಸುತ್ತಿದ್ದರು.ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗಾಯಾಳುಗಳನ್ನ ಕೊರಟಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪಘಾತ ನಡೆದಿದ್ದೇಗೆ.
ಸೋಮವಾರ ಸಂಜೆ ಗಾರ್ಮೆಂಟ್ಸ್ ಕೆಲಸ ಮುಗಿಸಿದ 50 ಕ್ಕೂ ಹೆಚ್ಚು ಮಹಿಳೆಯರನ್ನ ಮನೆಗೆ ಕೊಂಡೊಯ್ಯತ್ತಿದ್ದ ಬಸ್ ಕೊರಟಗೆರೆ ಬೈಪಾಸ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ಲಾರಿಗೆ ಮುಖಾಮುಖಿ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಟಿಪ್ಪರ್ ಲಾರಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದ್ದು ಬಸ್ ನ ಮುಂಭಾಗ ನಜ್ಜುಗುಜ್ಜಾಗಿದೆ.
ಗಾಯಾಳುಗಳ ನೆರವಿಗೆ ಧಾವಿಸಿದ ಮಾಜಿ ಶಾಸಕ
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕೊರಟಗೆರೆ ಮಾಜಿ ಶಾಸಕ ಸುಧಾಕರ್ ಲಾಲ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ. ತಮ್ಮ ಸ್ವಂತ ಕಾರಿನಲ್ಲೆ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದರು. ಅಫಘಾತದಿಂದ ಗಾಬರಿ ಗೊಂಡಿದ್ದ ಮಹಿಳೆಯರನ್ನ ಸಂತೈಸುವ ಮೂಲಕ ಆತ್ಮಸ್ಥೈರ್ಯ ತುಂಬಿದರು. ಬಳಿಕ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಿ ಮಹಿಳೆಯರು ತಮ್ಮ ತಮ್ಮ ಮನೆಗಳಿಗೆ ತೆರಳಲು ಅನುಕೂಲ ಕಲ್ಪಿಸಿದರು.