ಸಮಾರಂಭದಲ್ಲಿ ಕುಸಿದುಬಿದ್ದು ಯುವತಿ ಸಾವು
ಉಡುಪಿ; ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿಯೊಬ್ಬರು ದಿಢೀರ್ ಅಂತ ಕುಸಿದು ಬಿದ್ದು ಸಾವನ್ನಪ್ಪಿದ ಆತಂಕಕಾರಿ ಘಟನೆ ಉಡುಪಿಯಲ್ಲಿ ನಡೆದಿದೆ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಜೋತ್ಸ್ನಾ ಲೂಯಿಸ್ ಆಗಮಿಸಿದ್ದಳು. ಸಮಾರಂಭದಲ್ಲಿದ್ದ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.
ಬ್ರಹ್ಮಾವರ ತಾಲೂಕಿನ ಹಾವಂಜೆಯ ಯುವತಿ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕೂಡಲೇ ಮಣಿಪಾಲ್ ಆಸ್ಪತ್ರೆ ಸೇರಿಸಲಾಯಿತು. ಆದ್ರೆ ಆಕೆ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಆಕೆಗೆ ಯಾವುದೇ ಅನಾರೋಗ್ಯ ಸಮಸ್ಯೆ ಇರಲಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.