ಸರ್ಕಾರಿ ಶಾಲೆ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ!
ಉಡುಪಿ; ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಚಾರ ಬಯಲಾಗಿದೆ.. ಉಡುಪಿ ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಶಿಕ್ಷಕಿಯನ್ನು ಬಂಧಿಸಲಾಗಿದೆ..
ಕಾರ್ಕಳ ತಾಲೂಕಿನ ಗ್ರಾಮವೊಂದರ ವಾಸಿಯಾಗಿರುವ ಶಿಕ್ಷಕಿ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಾರೆ ಎಂದು ತಿಳಿದುಬಂದಿದೆ. ಸರ್ಕಾರಿ ಕೆಲಸದಲ್ಲಿದ್ದರೂ ಕೂಡಾ ಆಕೆ ಮನೆಯಲ್ಲೇ ವೇಶ್ಯವಾಟಿಕೆ ನಡೆಸುತ್ತಿದ್ದಳು ಎನ್ನಲಾಗಿದೆ.. ದಾಳಿ ವೇಳೆ ಒಬ್ಬ ಯುವತಿಯನ್ನು ರಕ್ಷಣೆ ಮಾಡಲಾಗಿದೆ..
ಶಿಕ್ಷಕಿ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಯಾರೋ ಮಾಹಿತಿ ನೀಡಿದ್ದು, ಅದರ ಆಧಾರದ ಮೇಲೆ ದಾಳಿ ನಡೆದಿದೆ..