CrimeNational

ಮೊರ್ಬಿ ತೂಗುಸೇತುವೆ ದುರಂತ; ಇಂದು ಸಂಜೆ ಮೋದಿ ಭೇಟಿ

ನವದೆಹಲಿ; ಗುಜರಾತ್‌ನ ಮೊರ್ಬಿಯಲ್ಲಿ ನಡೆದ ತೂಗು ಸೇತುವೆ ದುರಂತ ಸ್ಥಳಕ್ಕೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಇಂದು ಮಧ್ಯಾಹ್ನ 3:45ಕ್ಕೆ ಅಪಘಾತ ಸಂಭವಿಸಿದ ಮೊರ್ಬಿ ಸೇತುವೆ ಬಳಿಗೆ ಬರಲಿರುವ ಮೋದಿ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಅನಂತರ ಗಾಯಾಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಲಿದ್ದಾರೆ. ಸಂಜೆ 4.15ಕ್ಕೆ ಎಸ್ಪಿ ಕಚೇರಿಗೆ ತೆರಳಿ ಅಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ. ಈ ನಡುವೆ ಮೃತ ಸಂಬಂಧಿಕರನ್ನೂ ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿದುಬಂದಿದೆ.

Share Post