ಹಾಸನ ಅಶ್ಲೀಲ ವಿಡಿಯೋ ಪ್ರಕರಣ; ಆರೋಪಿ ಪ್ರಜ್ವಲ್ ಅರೆಸ್ಟ್
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು.. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿತ್ತು.. ಈ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ಹೋಗಿ ಕೂತಿದ್ದಾರೆ.. ಇತ್ತ ತನಿಖೆ ಕೈಗೊಂಡಿರುವ ಪೊಲೀಸರು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಪ್ರಜ್ವಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ..
ಚಿಕ್ಕಮಗಳೂರು ಜಿಲ್ಲೆಮೂಡಿಗೆರೆ ತಾಲ್ಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.. ಟ್ರೋಲ್ ಪೇಜ್ ಒಂದರ ಅಡ್ಮಿನ್ ಆಗಿರುವ ಈತ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್ ಗಳಲ್ಲಿ ಅಪ್‌ಲೋಡ್ ಮಾಡಿದ್ದ ಎನ್ನಲಾಗಿದೆ.. ಆರೋಪಿ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67(A) ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ..
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸಾವಿರಾರು ಅಶ್ಲೀಲ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಕವಷ್ಟೇ ಸರ್ಕಾರ ಎಸ್‌ಐಟಿ ತನಿಖೆಗೆ ಈ ಪ್ರಕರಣವನ್ನು ವಹಿಸಿತ್ತು.. ಈ ವಿಡಿಯೋಗಳಲ್ಲಿ ಹಾಸನ ಸೇರಿದಂತೆ ಹಲವು ಜಿಲ್ಲೆಗಳ ಮಹಿಳೆಯರು ಇದ್ದಾರೆ ಎನ್ನಲಾಗ್ತಿದೆ.. ಇನ್ನು ಈ ವಿಡಿಯೋಗಳನ್ನು ಕಾಣಿಸಿಕೊಂಡಿರುವ ಯಾವ ಮಹಿಳೆಯರ ಮುಖವನ್ನೂ ಕೂಡಾ ಬ್ಲರ್ ಮಾಡದೆ ವಿಡಿಯೋ ರಿಲೀಸ್ ಮಾಡಲಾಗಿತ್ತು..