ಶಿವಮೂರ್ತಿ ಶರಣರಿಗೆ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯಲು ಅವಕಾಶ
ಚಿತ್ರದುರ್ಗ; ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂದಿತರಾಗಿರುವ ಶಿವಮೂರ್ತಿ ಶರಣರ ಆರೋಗ್ಯ ತಪಾಸಣೆಗೆ ಕೋರ್ಟ್ ಅನುಮತಿ ನೀಡಿದೆ. ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದರಿಂದ ಆರೋಗ್ಯ ತಪಾಸಣೆಗೆ ಅವಕಾಶ ಕೇಳಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಕೋರ್ಟ್ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ.
ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ.ಮರಕಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಪ್ರಕಟಿಸಿದ್ದಾರೆ. ಆರೋಪಿಯನ್ನು ಇಂದು ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.