HIJAB CASE: ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿಚಾರ ಸಂಬಂಧ ಖ್ಯಾತ ವಕೀಲ ಕಪಿಲ್ ಸಿಬಲ್ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಕಪಿಲ್ ಸಿಬಲ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ವಿ.ರಮಣ, ಮೊದಲು ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ನೀಡಲಿ, ಅನಂತರ ನೋಡೋಣ. ಸದ್ಯದ ಪ್ರರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಪ್ರಕರಣದಲ್ಲಿ ಸಂವಿಧಾನಾತ್ಮಕ ಹಾಗೂ ಮೂಲಭೂತ ಹಕ್ಕುಗಳ ವಿಚಾರಗಳು ಅಡಕವಾಗಿವೆ. ಹೀಗಾಗಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದವನ್ನು ಹೈಕೋರ್ಟ್ ಬದಲು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಬೇಕು. ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠದಲ್ಲಿ ವಿಚಾರಣೆ ನಡಯಬೇಕೆಂದು ಕಪಿಲ್ ಸಿಬಲ್ ಮನವಿ ಮಾಡಿದ್ದರು.