ಸರ್ಕಾರಿ ಶಾಲೆಯ 150 ವಿದ್ಯಾರ್ಥಿಗಳು ಅಸ್ವಸ್ಥ; ಉಸಿರಾಟದ ತೊಂದರೆಯಿಂದ ಪರದಾಟ
ಚೆನ್ನೈ; ತಮಿಳುನಾಡಿನ ಹೊಸೂರಿನ ಸರ್ಕಾರಿ ಶಾಲೆಯ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಎಲ್ಲರೂ ಏಕಾಏಕಿ ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವರು ತುಂಬಾ ಅಸ್ವಸ್ಥಗೊಂಡಿದ್ದು, ಪೋಷಕರು ಆತಂಕಗೊಂಡಿದ್ದಾರೆ. ಹೊಸೂರು ಸರ್ಕಾರಿ ಆಸ್ಪತ್ರೆ ಬಳಿ ನೂರಾರು ಮಂದಿ ಸೇರಿದ್ದಾರೆ.
ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ ಉಂಟಾಗಲು ಖಾರಣ ಏನು ಎಂಬುದು ಇನ್ನೂ ದೃಢಪಟ್ಟಿಲ್ಲ. ಕೆಟ್ಟ ವಾಸನೆ ಸೇವನೆ ಅಥವಾ ಕಲುಷಿತ ಆಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿರಬಹುದೆಂದು ಶಂಕಿಸಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.