CrimeNational

ತೆಲಂಗಾಣದಲ್ಲಿ ಭಾರಿ ಸ್ಫೋಟ; 5 ಮಂದಿ ದಾರುಣ ಸಾವು!

ಹೈದರಾಬಾದ್‌; ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಭೀಕರ ಸ್ಫೋಟ ಸಂಭವಿಸಿದೆ.. ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್‌ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ..

ಇದನ್ನೂ ಓದಿ; ಹೊಸ ಚುನಾವಣಾ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್‌ ಗೆಲ್ಲೋದೆಷ್ಟು..?

ಕಾರ್ಖಾನೆ ರಿಯಾಕ್ಟರ್‌ ಸ್ಫೋಟಗೊಂಡು ದುರಂತ;

ತೆಲಂಗಾಣದ ಸಂಗಾರೆಡ್ಡಿಯ ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಎಸ್ ಬಿ ಆರ್ಗಾನಿಕ್ ಇಂಡಸ್ಟ್ರಿಯಲ್ಲಿ ಈ ಘಟನೆ ನಡೆದಿದೆ. ಮೃತರಲ್ಲಿ ಉದ್ಯಮದ ನಿರ್ದೇಶಕರೂ ಇದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ; ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

ಕಾರ್ಖಾನೆಯಲ್ಲಿ 50 ಮಂದಿ ಕಾರ್ಮಿಕರಿದ್ದರು;

ಸ್ಫೋಟಗೊಂಡ ಸಂದರ್ಭದಲ್ಲಿ ಒಳಗೆ 50 ಮಂದಿ ಕೆಲಸ ಮಾಡುತ್ತಿದ್ದರು.. ಹೀಗಾಗಿ ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ..  ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಿದ್ದಾರೆ.

ಇದನ್ನೂ ಓದಿ; 40 ಲಕ್ಷ ರೂ. ಸಂಬಳವಿರುವ 37ರ ಮಹಿಳೆಗೆ ವರ ಬೇಕಂತೆ; ಷರತ್ತು ಏನು ಗೊತ್ತಾ..?

 

Share Post