ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ
ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವೊಂದು ತಯಾರಿಸಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ದೆಹಲಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.
BBC ಒಳಗೊಂಡಿರುವ ಅಂತಾರಾಷ್ಟ್ರೀಯ ತೆರಿಗೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಇದೇ ವೇಳೆ ಅಲ್ಲಿನ ಅನೇಕ ಪತ್ರಕರ್ತರ ಲ್ಯಾಪ್‌ಟಾಪ್‌ಗಳು ಹಾಗೂ ಮೊಬೈಲ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದು ಸರ್ವೇ ಅಷ್ಟೆ. ಬಿಬಿಸಿ ಕಚೇರಿಯ ಅಕೌಂಟ್ ಬುಕ್ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
2002ರ ಗುಜರಾತ್ ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಾಣ ಮಾಡಿತ್ತು. ಈ ಸಂಬಂಧ ಬಿಬಿಸಿ ವಿವಾದಕ್ಕೆ ಕಾರಣವಾಗಿತ್ತು.