CrimeDistricts

ಬಾಲಕಿ ಜೊತೆ ಅಸಭ್ಯ ವರ್ತನೆ; ಸರ್ಕಾರಿ ಶಾಲೆ ಶಿಕ್ಷಕ ಅಂದರ್‌

ಚಿಕ್ಕೋಡಿ; ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಾಲಕಿಯ ಪೋಷಕರು ಚಿಕ್ಕೋಡಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಚಿಕ್ಕೋಡಿಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.. ವಿದ್ಯಾರ್ಥಿನಿ ಮನೆಗೆ ಅಳುತ್ತಾ ಬಂದಿದ್ದು, ಪೋಷಕರು ಏನಾಯಿತೆಂದು ವಿಚಾರಿಸಿದ್ದಾರೆ.. ಈ ವೇಳೆ ಆಕೆ ಶಾಲೆಯಲ್ಲಿ ನಡೆದದ್ದೆಲ್ಲವನ್ನೂ ವಿವರಿಸಿದ್ದಾಳೆ.. ಆಕೆಯ ಪೋಷಕರು ಇತರ ಮಕ್ಕಳ ಪೋಷಕರಿಗೂ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.. ಅದರಲ್ಲಿ ಕೆಲ ಪೋಷಕರು ತಮ್ಮ ಮಕ್ಕಳಿಗೂ ಕಿರುಕುಳ ಕೊಟ್ಟಿದ್ದಾನೆ ಎಂದು ದೂರಿದ್ದಾರೆ.. ಇದರಿಂದ ಆಕ್ರೋಶಗೊಂಡ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Share Post