ಅತ್ಯಾಚಾರ ನಡೆಸಿದ್ದಲ್ಲದೆ, ಮೆರವಣಿಗೆ ಮಾಡಿ ಅವಮಾನ: ಹೊತ್ತಿದ ಕಿಚ್ಚು
ದೆಹಲಿ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಮತ್ರಸ್ತೆಯನ್ನು ಅಕ್ರಮ ಮದ್ಯ ಮಾರಾಟಗಾರರ ಸಮೂಹ ಅಪಹರಿಸಿ, ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ದೆಹಲಿಯ ಶಹದಾರಾದಲ್ಲಿ ನಡೆದಿದೆ. ಯುವತಿ ಮೇಲೆ ಅತ್ಯಾಚಾರ ಮಾಡಿರುವ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಅಲ್ಲಿನ ಜನ ಯುವತಿಯ ತಲೆಯನ್ನು ಬೋಳಿಸಿ, ಆಕೆಗೆ ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದು ತಮ್ಮ ಬೀದಿ ತುಂಬಾ ಮೆರವಣಿಗೆ ಮಾಡಿ. ಮನಸೋ ಇಚ್ಛೆ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಜನರ ವಿರುದ್ಧ ಆಕ್ರೋಶದ ಕಿಚ್ಚು ಹೆಚ್ಚಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು. ಇದು ವೈಯಕ್ತಿಕ ದ್ವೇಷದಿದಂ ನಡೆದಿರುವ ಕೃತ್ಯ ಈ ಹಿಂದೆ ಯುವತಿಯ ಹಿಂದೆ ಬಿದ್ದಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅದಕ್ಕೆ ಈಕೆಯೇ ಕಾರಣ ಎಂದು ಈ ರೀತಿ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ಈಗಾಗಲೇ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದಿದ್ದಾರೆ.
ದೆಹಲಿ ಮಹಿಳಾ ಆಯೋಗದ ಛೇರ್‌ಮನ್ ಎಂ.ಎಸ್.ಮಲಿವಾಲ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಅತ್ಯಂತ ಘೋರವಾದ ಸಂಗತಿ. ಮಹಿಳೆಗೆ ನೀಡುವ ಗೌರವ ಇದಲ್ಲ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ನಾನು ನೊಟೀಸ್ ಜಾರಿ ಮಾಡುತ್ತಿದ್ದೇನೆ. ಅಪರಾಧ ಕೃತ್ಯದಲ್ಲಿ ತೊಡಗಿರುವ ಮಹಿಳೆಯರು ಮತ್ತು ಪುರುಷರನ್ನು ಬಂಧಿಸಿ, ಯುವತಿಗೆ ಮತ್ತು ಅವರ ಮನೆಯವರಿಗೆ ಬಿಗಿ ಭದ್ರತೆಯನ್ನುನ ಕಲ್ಪಿಸಿ ಎಂದು ಟ್ವೀಟ್ ಮಾಡಿದ್ದಾರೆ.
कस्तूरबा नगर में 20 साल की लड़की का अवैध शराब बेचने वालों द्वारा गैंगरेप किया गया, उसे गंजा कर, चप्पल की माला पहना पूरे इलाक़े में मुँह काला करके घुमाया। मैं दिल्ली पुलिस को नोटिस जारी कर रही हूँ। सब अपराधी आदमी औरतों को अरेस्ट किया जाए और लड़की और उसके परिवार को सुरक्षा दी जाए। pic.twitter.com/4ExXufDaO3
— Swati Maliwal (@SwatiJaiHind) January 27, 2022
ಮಲಿವಾಲ್ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದು ತುಂಬಾ ನಾಚಿಕೆಗೇಡಿನ ಸಂಗತಿ. ಅಪರಾಧಿಗಳಿಗೆ ಇಷ್ಟೊಂದು ಧೈರ್ಯ ಬಂದಿದ್ದು ಹೇಗೆ? ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ದೆಹಲಿ ಜನತೆ ಇಂತಹ ಘೋರ ಅಪರಾಧ ಮತ್ತು ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದಿದ್ದಾರೆ.
ये बेहद शर्मनाक है। अपराधियों की इतनी हिम्मत हो कैसे गई? केंद्रीय गृहमंत्री जी और उपराज्यपाल जी से मैं आग्रह करता हूँ कि पुलिस को सख़्त एक्शन लेने के निर्देश दें, क़ानून व्यवस्था पर ध्यान दें। दिल्लीवासी इस तरह के जघन्य अपराध और अपराधियों को किसी भी क़ीमत पर बर्दाश्त नहीं करेंगे। https://t.co/aAinx2Sbti
— Arvind Kejriwal (@ArvindKejriwal) January 27, 2022