ಕತ್ತು ಸೀಳಿ ಐಪಿಎಸ್ ಅಧಿಕಾರಿಯ ಬರ್ಬರ ಹತ್ಯೆ
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ಅವರ ನಿವಾಸದಲ್ಲೇ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
1992ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಸೀಳಿ ಅವರನ್ನು ಹತ್ಯೆ ಮಾಡಲಾಗಿದ್ದು, ಯಾರು ಈ ಕೊಲೆ ಮಾಡಿದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಮನೆಯ ಸಹಾಯಕ ನಾಪತ್ತೆಯಾಗಿದ್ದು, ಆತನೇ ಈ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.