CrimeDistricts

ನಗರಸಭೆ ಸದಸ್ಯನ ಕೊಲೆ ಪ್ರಕರಣ; ಹಾಸನದಲ್ಲಿ ಬಿಗಿಭದ್ರತೆ

ಹಾಸನ; ಹಾಸನ ನಗರಸಭೆ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಪ್ರಶಾಂತ್ ನಾಗರಾಜ್‌ರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದರಿಂದಾಗಿ ಹಾಸನ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಡೆ ಪೊಲೀಸ್‌ ಬಿಗಿಬಂದೋಬಸ್ತ್‌ ಏರ್ಪಡಿಸಲಾಗಿದೆ. ಇನ್ನು ಕೊಲೆ ಹಿನ್ನೆಲೆಯಲ್ಲಿ ಹಾಸನ ಕಟ್ಟಿಕೆರೆ ಮಾರುಕಟ್ಟೆಯನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಲಾಗಿದೆ.

ಹಾಸನ ನಗರದ ಜವೇನಹಳ್ಳಿ ಮಠದ ರಸ್ತೆಯ, ಲಕ್ಷ್ಮೀಪುರ ಬಡಾವಣೆಯಲ್ಲಿ 16ನೇ ವಾರ್ಡ್ ಸದಸ್ಯ ಪ್ರಶಾಂತ್ ನಾಗರಾಜ್ ಒಬ್ಬರೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ. ಪ್ರಶಾಂತ್‌ ನಾಗರಾಜ್‌ ಅವರನ್ನು ಅಟ್ಟಾಡಿಸಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಈ ಕೃತ್ಯದಿಂದಾಗಿ ಹಾಸನದಲ್ಲಿ ಭೀತಿ ಶುರುವಾಗಿದೆ. ಹೀಗಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share Post