CrimeNational

ಜೋಕಾಲಿಯೇ ಉರುಳಾಯ್ತು; ಆಟವಾಡುತ್ತಿದ್ದ ಬಾಲಕ ದಾರುಣ ಸಾವು

ರಾಜಸ್ಥಾನ; ಜೋಕಾಲಿಯಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಹತ್ತು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬರನ್‌ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ಕಟ್ಟಿದ್ದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಚಬ್ರ ಪಟ್ಟಣದ ಮನೆಯಲ್ಲಿ ಈ ಘಟನೆ ನಡೆದಿದೆ. ಹತ್ತು ವರ್ಷ ಬಾಲಕ ಆದಿಲ್‌ ಸಾವನ್ನಪ್ಪಿರುವಾತ. ಮಂಗಳವಾರ ಆದಿಲ್‌ ಹಾಗೂ ಮತ್ತೊಬ್ಬ ಬಾಲಕ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಉಯ್ಯಾಲೆಯ ಹಗ್ಗ ಆದಿಲ್‌ನ ಕುತ್ತಿಗೆಗೆ ಸುತ್ತಿಕೊಂಡಿದೆ. ಇದರಿಂದಾಗಿ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆದ್ರೆ ಅಷ್ಟರಲ್ಲಾಗಲೇ ಆದಿಲ್‌ ಸಾವನ್ನಪ್ಪಿದ್ದ. ಈ ಬಗ್ಗೆ ಚಬ್ರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Post