CrimeNational

ಕಾಂಚಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ; ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದ್ದರಿಂದ ದುರ್ಘಟನೆ!

ದೇಶದಲ್ಲಿ ರೈಲು ಅಪಘಾತಗಳು ಪದೇ ಪದೇ ನಡೆಯುತ್ತಿವೆ.. ಒಂದೇ ಹಳ್ಳಿಯಲ್ಲಿ ಎದುರು ಬದುರು ರೈಲು ಬರುವುದು, ಸಿಗ್ನಲಿಂಗ್‌ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ರೈಲು ದುರ್ಘಟನೆ ನಡೆಯುತ್ತಿವೆ.. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಇಂತಹದ್ದೇ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದ್ದರಿಂದ ಪ್ರಯಾಣಿಕರು ಪರದಾಡಿದ್ದರು.. ಈಗ ಇಂತಹದ್ದೇ ಮತ್ತೊಂದು ರೈಲು ಅಪಘಾತ ನಡೆದಿದೆ.. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ..

ಸೀಲ್ದಾದಿಂದ ಹೊರಟಿದ್ದ ಕಾಂಚನಂಜಗ ಎಕ್ಸ್‌ಪ್ರೆಸ್ ಅಪಘಾತಕ್ಕೀಡಾಗಿದೆ.. ನ್ಯೂ ಜಲ್ಪೈಗುರಿ ನಿಲ್ದಾಣದಿಂದ  ಹೊರಟ ಕೆಲವೇ ಕ್ಷಣಗಳಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎರಡು ಬೋಗಿಗಳು ಹಳಿ ತಪ್ಪಿವೆ.. ಒಂದು ಬೋಗಿ ಇನ್ನೊಂದು ರೈಲಿನ ಬೋಗಿ ಮೇಲೇರಿದೆ.. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.. ಅಪಘಾತದಿಂದಾಗಿ ಈ ಭಾಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ..

ಸೀಲ್ದಾಹ್-ಬೌಂಡ್ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಹೊರಡುತ್ತದೆ. ರೈಲು ರಂಗಪಾಣಿ ಪ್ರದೇಶವನ್ನು ತಲುಪುತ್ತಿದ್ದಂತೆ, ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಎದುರು ಭಾಗದಲ್ಲಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಅಧಿಕಾರಿಗಳು ಇನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ.

ರೈಲ್ವೆ ಅಧಿಕಾರಿಗಳು, ಆರ್‌ಪಿಎಫ್ ಮತ್ತು ಜಿಆರ್‌ಪಿಎಫ್ ಸಿಬ್ಬಂದಿ ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೊದಲು ಸ್ಥಳೀಯರು ರಕ್ಷಣಾ ಕಾರ್ಯ ಆರಂಭಿಸಿದರು. ಈ ಘಟನೆ ಹೇಗೆ ನಡೆದಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಬೇಕಿದೆ. ಆದರೆ, ಸಿಗ್ನಲಿಂಗ್ ಸಮಸ್ಯೆಯಿಂದ ಗೂಡ್ಸ್ ರೈಲು ಅದೇ ಮಾರ್ಗದಲ್ಲಿ ಚಲಿಸಿದೆ ಎಂದು ಆರಂಭದಲ್ಲಿ ತಿಳಿದುಬಂದಿದೆ.

Share Post