CrimeNational

ನಾಳೆ ಸೋನಿಯಾ ಗಾಂಧಿ ವಿಚಾರಣೆ ಹಿನ್ನೆಲೆ; ಕಾಂಗ್ರೆಸ್‌ನಿಂದ ಪ್ರತಿಭಟನೆಗೆ ಕರೆ

ಬೆಂಗಳೂರು; ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ನಾಳೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತೆ ಪ್ರತಿಭಟನೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ರಾಹುಲ್‌ ಗಾಂಧಿ ವಿಚಾರಣೆ ಸಂದರ್ಭದಲ್ಲಿ ಮಾಡಿದಂತೆ ಈ ಬಾರಿಯೂ ಕಾಂಗ್ರೆಸ್‌ ನಾಯಕರು, ಕಾರ್ಯಕ್ರರ್ತರು ಬೀದಿಗಿಳಿಯುತ್ತಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆಗೆ ಕರೆ ನೀಡಿದೆ. ಫ್ರೀಡಂ ಪಾರ್ಕ್‌ನಿಂದ ರಾಜಭವನದ ವರೆಗೆ ನಾಳೆ ಕಾಂಗ್ರೆಸ್‌ ಮೆರವಣಿಗೆ ನಡೆಸಲು ತೀರ್ಮಾನಿಸಿದೆ. ಇದರಲ್ಲಿ ಕಾಂಗ್ರೆಸ್‌ ಶಾಸಕರು, ಸಂಸದರು, ಎಂಎಎಲ್‌ಸಿಗಳು, ಎಲ್ಲರೂ ಪಾಲ್ಗೊಳ್ಳಲಿದ್ದಾರೆ. ಇನ್ನು ದೆಹಲಿಯಲ್ಲೂ ಕೂಡಾ ಕಾಂಗ್ರೆಸ್‌ ಪ್ರತಿಭಟನೆಗೆ ಮುಂದಾಗಿದೆ.

Share Post