CinemaCrime

ಪೊಲೀಸ್‌ ಇನ್ಸ್‌ಪೆಕ್ಟರ್‌ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿ; ಪೊಲೀಸ್‌ ಇನ್ಸ್‌ಪೆಕ್ಟರ್‌ ಮನೆ ಮೇಲೆಯೇ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಕುಶಾಲನಗರದಲ್ಲಿ ವಾಸವಿರುವ ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗಿದೆ.

ಪೊಲೀಸ್‌ ಇನ್ಸ್‌ಪೆಕ್ಟರ್‌ ಮಹೇಶ್‌ ದೇವರು ಹಾಗೂ ನೀರಾವರಿ ಇಲಾಖೆ ಎಂಜಿನಿಯರ್‌ ರಫೀಕ್‌ ಹಾಗೂ ಅವರ ಇಬ್ಬರು ಸಂಬಂಧಿಕರ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಇನ್ಸ್‌ಪೆಕ್ಟರ್‌ ಮಹೇಶ್‌ ಮನೆಯಲ್ಲಿ ಅಕ್ರಮ ಚಿನ್ನ ಇರುವುದಾಗಿ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮಹೇಶ್‌ ಅವರು ಸದ್ಯ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Share Post