Crime

ಕೊವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ; ಪ್ರಶ್ನಿಸಿದ ವ್ಯಕ್ತಿಗೆ 1 ಲಕ್ಷ ರೂ. ದಂಡ..!

ತಿರುವನಂತಪುರ: ಕೇಂದ್ರ ಸರ್ಕಾರ ನೀಡುತ್ತಿರುವ ಉಚಿತ ಕೊವಿಡ್‌ ಲಸಿಕೆಗಳ ಪ್ರಮಾಣ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವನ್ನು ಪ್ರಕಟಿಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾ ಮಾಡಿದೆ. ಜನರ ತೆರಿಗೆ ಹಣದಲ್ಲಿ ಲಸಿಕೆ ನೀಡಲಾಗುತ್ತಿದೆ. ಹೀಗಾಗಿ, ಪ್ರಮಾಣ ಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರವನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಬೇಕೆಂದು ವ್ಯಕ್ತಿಯೊಬ್ಬರು ಕೋರಿದ್ದರು. ಆದರೆ ಇದನ್ನು ಒಪ್ಪದ ಕೇರಳ ಹೈಕೋರ್ಟ್‌, ಅರ್ಜಿದಾರರಿಗೆ ದಂಡ ವಿಧಿಸಿದೆ. ಆರು ವಾರಗಳೊಳಗೆ ಕೇರಳ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 1 ಲಕ್ಷ ರೂ.ಗಳ ದಂಡ ಪಾವತಿಸಬೇಕೆಂದು ಸೂಚನೆ ನೀಡಿದೆ.

ರಾಜಕೀಯ ಪ್ರೇರಿತ ಹಾಗೂ ಪ್ರಚಾರಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇದ್ದಂತೆ ಕಾಣುತ್ತಿಲ್ಲ. ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ವಿನಾಕಾರಣ ಕೋರ್ಟ್‌ ಸಮಯ ವ್ಯರ್ಥ ಮಾಡಲಾಗಿದೆ ಎಂದು ಕೋರ್ಟ್‌ ಅಭಿಪ್ರಾಯ ಪಟ್ಟಿದೆ. ಅಲ್ಲದೆ, ಕೋರ್ಟ್‌ ಸಮಯ ವ್ಯರ್ಥ ಮಾಡಿದ್ದರಿಂದಾಗಿ, ಅರ್ಜಿದಾರನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

Share Post