CrimeDistricts

ಪ್ರಮೋದ್‌ ಮುತಾಲಿಕ್‌ಗೆ ಜೀವ ಬೆದರಿಕೆ; ದೂರು ದಾಖಲು

ಚಿಕ್ಕೋಡಿ; ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ಗೆ ಕೆಲ ದಿನಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಕರೆ ಮಾಡುತ್ತಿರುವ ದುಷ್ಕರ್ಮಿಗಳು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರಂತೆ. ಈ ಹಿನ್ನೆಲೆಯಲ್ಲಿ ಮುತಾಲಿಕ್‌ ಅವರು ಹುಕ್ಕೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪ್ರಮೋದ್ ಮುತಾಲಿಕ್, ಬೇರೆ ಬೇರೆ ನಂಬರ್‌ಗಳಿಂದ ನನಗೆ ಕರೆಗಳು ಬರುತ್ತಿವೆ. ತುಂಡು ಮಾಡಿ ನಾಯಿಗೆ ಹಾಕುತ್ತೇವೆ ಎಂದು ಉರ್ದು ಮಿಶ್ರಿತ ಭಾಷೆಯಲ್ಲಿ ಹೇಳುತ್ತಿದ್ದಾರೆ. ಅವಾಚ್ಯ ಶಬ್ದಗಳಲ್ಲಿ ನಿಂದಿಸುತ್ತಿದ್ದಾರೆ. ಹೀಗಾಗಿ ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ಅವರು ಹೇಳಿದರು.

ನನಗೆ ಬೆದರಿಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಬೆದರಿಕೆಗಳು ಬಂದಿದ್ದವು. ಆದ್ರೆ ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಮುತಾಲಿಕ್‌ ಸ್ಪಷ್ಟಪಡಿಸಿದ್ದಾರೆ.

Share Post