BengaluruCrime

ಲಿವಿಂಗ್‌ ಟುಗೆದರ್‌ನಲ್ಲಿದ್ದ ಜೋಡಿ ಅನುಮಾನಾಸ್ಪದ ಸಾವು!; ನಡೆದಿದ್ದೇನು..?

ಬೆಂಗಳೂರು; ಎಲ್ಲೆಲ್ಲಿಂದಲೋ ಬಂದು ಬೆಂಗಳೂರಿನಲ್ಲಿ ಪರಿಚಯವಾಗಿ ಪರಸ್ಪರ ಪ್ರೀತಿಸಿ ಲಿವಿಂಗ್‌ ಟುಗೆದರ್‌ನಲ್ಲಿದ್ದ ಜೋಡಿ ನಿಗೂಢವಾಗಿ ಸಾವನ್ನಪ್ಪಿದೆ.. ಮೂರು, ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಜೋಡಿ ಸಾವನ್ನಪ್ಪಿದ್ದು, ಮನೆಯಿಂದ ಕೆಟ್ಟ ವಾಸನೆ ಬರಲು ಶುರುವಾದಾಗ ಸಾವಿನ ಬಗ್ಗೆ ಗೊತ್ತಾಗಿದೆ.. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಅನುಮಾನ ಮೂಡಿದೆ..

ಬೆಂಗಳೂರಿನ ಬನ್ನೇರುಘಟ್ಟದ ಜನತಾ ಕಾಲೋನಿಯ ವಿಶ್ವನಾಥ್‌ ಎಂಬವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ.. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಲಕ್ಕಮ್ಮ ಹಾಗೂ ಡ್ರೈವರ್‌ ಕೆಲಸ ಮಾಡುತ್ತಿದ್ದ ಪ್ರಭು ಸಾವನ್ನಪ್ಪಿದವರು.. ಕೆಲ ವರ್ಷಗಳ ಹಿಂದೆ ಇಬ್ಬರೂ ಪರಿಚಯವಾಗಿದ್ದರು.. ನಂತರ ಇಬ್ಬರ ನಡುವೆ ಪ್ರೀತಿ ಚಿಗುರಿದ್ದು, ಇಬ್ಬರೂ ಸೇರಿ ಒಂದು ಬಾಡಿಗೆ ಮನೆ ಪಡೆದು ಜೀವನ ನಡೆಸುತ್ತಿದ್ದರು.. ಆದ್ರೆ ಅದೇನಾಯ್ತೋ ಏನೋ ಇಬ್ಬರೂ ಸಾವನ್ನಪ್ಪಿದ್ದಾನೆ.. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ..

ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಸಾವಿನ ವಿಷಯ ಗೊತ್ತಾಗಿದೆ..

 

Share Post