CrimeDistricts

ಕೋಳಿ ತುಂಬಿದ್ದ ಲಾರಿ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು..!

ಮಡಿಕೇರಿ; ಸುಂಠಿಕೊಪ್ಪ ಸಮೀಪದ ಏಳನೇ ಹೊಸಕೋಟೆ ಬಳಿ ಲಾರಿಯೊಂದು ಉರುಳಿಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಈ ದುರ್ಘಟನೆ ನಡೆದಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ನಾಗಭೂಷಣ್ ಎಂದು ಗುರುತಿಸಲಾಗಿದೆ.

ಲಾರಿ ಕೋಳಿ ತುಂಬಿಕೊಂಡು ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ. ಚಾಲಕ ನಾಗಭೂಷಣ್ ಲಾರಿಯಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಆಗಮಿಸಿ, ಲಾರಿಯನ್ನು ತೆರವುಗೊಳಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Share Post