CrimeNational

ಶಾಲಾ ಮಕ್ಕಳಿದ್ದ ಆಟೋಗೆ ಲಾರಿ ಡಿಕ್ಕಿ; ಎಂಟು ಮಕ್ಕಳ ಸ್ಥಿತಿ ಗಂಭೀರ!

ಅಮರಾವತಿ; ಆಂಧ್ರಪ್ರದೇಶದ ಅಮೃಾವತಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯೊಂದು ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಆಟೋದಲ್ಲಿದ್ದ ಎಂಟು ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಎಂಟು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಒಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿದ್ದಾರೆ ಎಂದು ತಿಳಿದುಬಂದಿದೆ. ಈ ಭೀಕರ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಅಪಘಾತದ ನಂತರ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕ ಹಾಗೂ ಕ್ಲೀನರ್​ನನ್ನು ಸ್ಥಳೀಯರು ಹಿಡಿದಿದ್ದಾರೆ. ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಲಾಗಿದೆ.

ಆಟೋ ಬಹುತೇಕ ನಜ್ಜುಗುಜ್ಜಾಗಿದೆ.

 

Share Post