ಸೋನಿಯಾಗಾಂಧಿ ವಿಚಾರಣೆ ಅಂತ್ಯ; ಜು. 25 ಕ್ಕೆ ಹಾಜರಾಗಲು ಸೂಚನೆ
ಬೆಂಗಳೂರು; ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಇಂದಿನ ವಿಚಾರಣೆ ಮುಕ್ತಾಯವಾಗಿದೆ, ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾದ ಸೋನಿಯಾಗಾಂಧಿ ಮೂರು ಗಂಟೆಗಳ ವಿಚಾರಣೆ ಎದುರಿಸಿದ್ದಾರೆ. ಅನಂತರ ಅವರನ್ನು ಮನೆಗೆ ಕಳುಹಿಸಲಾಗಿದೆ. ನಂತರ ಜುಲೈ 25 ರಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ
ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಸೋನಿಯಾ ಮೇಲಿದೆ. ಈ ಸಂಬಂಧ ಮಹಿಳಾ ಅಧಿಕಾರಿ ನೇತೃತ್ವದಲ್ಲಿ ಸೋನಿಯಾಗಾಂಧಿಯವರ ವಿಚಾರಣೆ ನಡೆಸಲಾಗುತ್ತಿದೆ. ಸೋನಿಯಾಗೆ ಈಗಾಗಲೇ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.