CrimeNational

ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ರೈಲು; ಐವತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮುಂಬೈ; ಮಹಾರಾಷ್ಟ್ರದ ಗೊಂದಿಯಾದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು, ಬಳಿಕ ಪ್ರಯಾಣಿಕ ರೈಲು ಹಳಿ ತಪ್ಪಿದೆ. ಇದರಿಂದಾಗಿ 53 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳವಾರ ತಡರಾತ್ರಿ 2.30ರ ವೇಳೆಗೆ ಈ ಘಟನೆ ಸಂಭವಿಸಿದೆ. ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದೆ. ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್​​ಗೆ ಎಸ್‌ಎಫ್ ಎಕ್ಸ್‌ಪ್ರೆಸ್ (20843)- ರೈಲನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ, ಇದರಿಂದಾಗಿ ಅದು ಮುಂದೆ ನಿಂತಿದ್ದ ಗೂಡ್ಸ್ ರೈಲಿನ ಬ್ರೇಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಎಸ್‌ಇಸಿಆರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share Post