CinemaCrime

ಮಲಯಾಳಂ ನಟ ಎನ್‌.ಡಿ. ಪ್ರಸಾದ್‌ ಆತ್ಮಹತ್ಯೆ

ತಿರುವನಂತಪುರ; ಮಲಯಾಳಂ ನಟ ಎನ್‌.ಡಿ. ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಳನಾಯಕನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. 2016ರಲ್ಲಿ ಬಿಡುಗಡೆಯಾಗಿದ್ದ ‘ಆ್ಯಕ್ಷನ್‌ ಹಿರೋ ಬಿಜು‘ ಸಿನಿಮಾದಲ್ಲಿ ಅವರು ಖಳನ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಡ್ರಗ್ಸ್‌ ಪ್ರಕರಣ ಸೇರಿದಂತೆ ಅವರ ಮೇಲೆ ಹಲವು ಪೊಲೀಸ್‌ ಪ್ರಕರಣಗಳು ದಾಖಲಾಗಿದ್ದವು.

Share Post