CinemaCrimeHealth

ಮಲಯಾಳಂ ಹಾಸ್ಯನಟ ಕೊಲ್ಲಂ ಸುಧಿ ಅಪಘಾತದಲ್ಲಿ ದುರ್ಮರಣ

ತಿರುವನಂತಪುರ; ಮಳಯಾಳಂನಲ್ಲಿ ಹಾಸ್ಯ ಕಲಾವಿದರಾಗಿ ಹೆಸರು ಮಾಡಿದ್ದ ಕೊಲ್ಲಂ ಸುಧಿ ಅಪಘಾತದಲ್ಲಿ ನಿಧನರಾಗಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಅವರು ಹೆಸರು ಮಾಡಿದ್ದರು. ಅವರು ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಬರುತ್ತಿದ್ದಾಗ ಅವರ ಕಾರಿಗೆ ಟ್ರಕ್‌ ಒಂದು ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತ್ರಿಶೂರ್ ಸಮೀಪ ಇಂದು ಮುಂಜಾನೆ 4-30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಅವರು ವಡಕರಾದಲ್ಲಿ ನೈಟ್‌ ಶೋ ಕಾರ್ಯಕ್ರಮಕ್ಕೆ ಹೋಗಿದ್ದರು. ಅದನ್ನು ಮುಗಿಸಿಕೊಂಡು ಬೆಳಗಿನ ಜಾವ ತಮ್ಮ ಮನೆಗೆ ಮರಳುತ್ತಿದ್ದರು. ಘಟನೆಯಲ್ಲಿ ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದೆ.

Share Post