ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಕೋಲ್ಕತ್ತಾ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ, ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಉತ್ತರ ಬಂಗಾಳದ ಸಲಗರಾ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿಯವರು ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ ಮುಗಿಸಿ ವಾಪಸ್ ಬರುವಾಗ ಹವಾಮಾನ ವೈಪರಿತ್ಯವಾಗಿದೆ. ಬಾಗ್ದೋಗ್ರಾದಿಂದ ಜಲಪೈಗೂರಿಗೆ ಹೆಲಿಕಾಪ್ಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಲ್ಯಾಂಡ್ ಆಗಬೇಕಿದ್ದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಕಡೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅನಂತರ ಮಮತಾ ಬ್ಯಾನರ್ಜಿಯವರು, ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಿ, ನಂತರ ಕೋಲ್ಕತ್ತಾಗೆ ಹಿಂತಿರುಗಿದರು.