ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; 7 ನವಜಾತ ಶಿಶುಗಳ ದಾರುಣ ಸಾವು!
ನವದೆಹಲಿ; ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.. ದುರಂತದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ.. ಪ್ರಪಂಚ ನೋಡಿದ ಕೆಲವೇ ಗಂಟೆಗಳಲ್ಲಿ ಶಿಶುಗಳು ಇಹಲೋಕ ತ್ಯಜಿಸಿವೆ..
ಶನಿವಾರ ರಾತ್ರಿ 11.32ರ ಸುಮಾರಿಗೆ ಈ ದುರಂತ ಸಂಭವಿಸಿದೆ.. ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.. ಮೊದಲ ಮಹಡಿಯಲ್ಲಿದ್ದ 12 ಶಿಶುಗಳನ್ನು ರಕ್ಷಣೆ ಮಾಡಲಾಗಿದ್ದು, ಆ ಶಿಶುಗಳನ್ನು ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ..
ಘಟನೆಗೆ ಕಾರಣ ಎಂದು ತಿಳಿದುಬಂದಿಲ್ಲ.. ಸುಮಾರು 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು.. ಆಸ್ಪತ್ರೆಯಲ್ಲಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಲಾಗಿದೆ.. ಹಲವರಿಗೆ ಸುಟ್ಟು ಗಾಯಗಳಾಗಿವೆ ಎಂದು ತಿಳಿದುಬಂದಿದೆ..